ಹುಬ್ಬಳ್ಳಿ: ಡಿಸೆಂಬರ್ 22 ಹಾಗೂ 25 ರಂದು ನಡೆಯುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪ್ರತಿಯೊಬ್ಬ ನಾಗರಿಕರು ಮತಗಟ್ಟೆಗಳಿಗೆ ಬಂದು ತಮ್ಮ ಮತ ಚಲಾಯಿಸಬೇಕು ಎಂದು ಬೀದಿ ನಾಟಕ ಮತ್ತು ಜನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಜನಜಾಗೃತಿ ಮೂಡಿಸಲಾಯಿತು. ಕೊರೊನಾ ಮತ್ತು ಮತದಾನದ ಜಾಗೃತಿಗಾಗಿ ವಾರ್ತಾ ಮತ್ತು ಸಾರ್ವಜನ...