ಕರ್ನಾಟಕ ರಾಜ್ಯದಲ್ಲಿ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಬೀಡಿ ಕಾರ್ಮಿಕರಿದ್ದಾರೆ. ಕೊರೊನಾ ಒಂದನೇ ಅಲೆಯ ಸಂದರ್ಭದಲ್ಲಿ ಸರ್ಕಾರದ ಅವೈಜ್ಞಾನಿಕ ಲಾಕ್ ಡೌನ್ ನಿಂದಾಗಿ ಬೀಡಿ ಕಾರ್ಮಿಕರು ತಿಂಗಳುಗಟ್ಟಲೆ ಕೆಲಸವಿಲ್ಲದೆ ಉಪವಾಸ ಬೀಳುವಂತಾಗಿದೆ. ಇದೀಗ ಸ್ವಲ್ಪ ಚೇತರಿಕೆಯಾಗುವ ಸಂದರ್ಭದಲ್ಲಿ ಎರಡನೇ ಅಲೆಯು ಅವರನ್ನು ಅಪ್ಪಳಿಸಿ ಗಾಯದ ಮೇಲೆ ಬರೆ...