ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದ್ದು, ಸದ್ಯ ತಮ್ಮ ಸ್ವಯಂ ನಿವೃತ್ತಿಗೆ ಅರ್ಜಿ ಕೂಡ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಸದ್ಯದ ವರದಿಗಳ ಪ್ರಕಾರ ಅವರು ಕಾಂಗ್ರೆಸ್ ಪಕ್ಷದಲ್ಲಿ ಮುಂದೆ ಗುರುತಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ನ ಹಿರಿಯ ನಾಯ...