ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಪಾರ್ಟಿಗೇಟ್ ಹಗರಣಕ್ಕೆ ಸಂಬಂಧಿಸಿ ಬಲವಂತದಿಂದ ತನ್ನನ್ನು ರಾಜೀನಾಮೆ ನೀಡುವಂತೆ ಮಾಡಲಾಯಿತು ಎಂದು ಅವರು ದೂರಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ಸಂತೋಷಕೂಟಗಳನ್ನು ಆಯೋಜಿಸಿದ್ದ ಬಗ್...