ನವದೆಹಲಿ: ಒಡಿಶಾದ ಬಾಲಸೋರ್ನ ಕರಾವಳಿಯಲ್ಲಿ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಹೊಸ ಆವೃತ್ತಿಯನ್ನು ಗುರುವಾರ ಭಾರತವು ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ರಕ್ಷಣಾ ಮೂಲಗಳ ಪ್ರಕಾರ, ಕ್ಷಿಪಣಿಯು ಹೊಸ ತಾಂತ್ರಿಕ ಬೆಳವಣಿಗೆಗಳನ್ನು ಹೊಂದಿದ್ದು, ಯಶಸ್ವಿಯಾಗಿ ಸಾಬೀತಾಗಿದೆ. ಇದಕ್ಕೂ ಮುನ್ನ ಜನವರಿ 1...