ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ಹಾಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋಟ್ ನೂತನ ಲೋಕಾಯುಕ್ತರಿಗೆ ಪ್ರಮಾಣವಚನ ಬೋಧಿಸಿದರು. ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಜ್ಯಪಾಲರು ಹಾಗೂ ಮು...