ರಘೋತ್ತಮ ಹೊ.ಬ 1954 ಡಿಸೆಂಬರ್ 4 ರಂದು ಬರ್ಮಾದ ರಂಗೂನ್ ನಲ್ಲಿ ಅಂತರರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯುತ್ತದೆ. ಆ ಸಮ್ಮೇಳನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ರು ಮುಖ್ಯ ಅತಿಥಿಯಾಗಿರುತ್ತಾರೆ. ಆ ಸಂದರ್ಭದಲ್ಲಿ ಬೌದ್ಧ ಶಾಸನ ಕೌನ್ಸಿಲ್ ನಲ್ಲಿ ಅವರು ಭಾರತದಲ್ಲಿ ಬೌದ್ಧ ಧರ್ಮ ಬೆಳೆಸಲು ಕೈಗೊಳ್ಳಬೇಕಾದ ಕ್ರಮಗಳೇನು ಎಂಬುದನ್ನು ವಿವರಿ...