ಮೈಸೂರು: ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಅವರು ಇದ್ದ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯವಾದ ಘಟನೆ ನಡೆದಿದ್ದು, ಈ ವೇಳೆ ಸಚಿವರ ಸಿಬ್ಬಂದಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಸಂಜೆ ಮೈಸೂರಿನ ಬಂಬೂ ಬಜಾರ್ ಬಳಿ ಈ ಘಟನೆ ನಡೆದಿದ್ದು, ಘಟನೆ ವೇಳೆ ಗಾಯಾಳುವನ್ನು ಆಸ್ಪತ...