ಇತ್ತೀಚೆಗೆ ಹೊಟೇಲ್ ಗಳ ಊಟ ಸುರಕ್ಷಿತವಲ್ಲ ಎಂಬ ಸ್ಥಿತಿಗೆ ತಲುಪಿದ್ದು, ಸಾರ್ವಜನಿಕರು ಇಂತಹ ಆತಂಕವನ್ನು ಆಗಾಗ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ದೆಹಲಿಯಲ್ಲಿರುವ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್) 4 ವರ್ಷದ ಮಗುವಿಗೆ ನೀಡಿದ ಊಟದಲ್ಲಿ ಜಿರಳೆ ಪತ್ತೆಯಾಗಿದ್ದು, ಈ ಘಟನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ...