ಬೆಂಗಳೂರು: ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶವು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಭಾರೀ ಜನಸ್ತೋಮದೊಂದಿಗೆ ನಡೆಯಿತು. ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತ್ತು. ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಹೋರಾಟಗಾರ್ತಿ ರಮಾಬಾಯಿ ಅಂಬೇಡ್ಕರ್, ಈ ದೇಶದಲ್ಲಿ ಅಂಬೇಡ್ಕರ್ ಕೊಟ್ಟ ಸಂವಿಧಾನವನ್ನು ಬಳಸಿಕೊಂಡು ಅನ್ಯಾಯದ ವಿರ...