ಬೆಂಗಳೂರು: ದಲಿತರ ಮೇಲೆ ರಾಜ್ಯಾದ್ಯಂತ ದೌರ್ಜನ್ಯ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಜೂ.30ರಂದು ರಾಜ್ಯಾದ್ಯಂತ ಹೋರಾಟಕ್ಕೆ ದಲಿತ ಹಕ್ಕುಗಳ ಸಮಿತಿ(ಡಿಎಚ್ ಎಸ್) ಕರೆ ನೀಡಿದೆ. ದಲಿತರ ಮೇಲಿನ ದೌರ್ಜನ್ಯವನ್ನು ತಡೆಯದ, ಅವರಿಗೆ ರಕ್ಷಣೆ ನೀಡದ ರಾಜ್ಯ ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ...