ಬೀದರ್: ಶಾಲಾ ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ಸರ್ಕಾರ ದಿನಕ್ಕೊಂದು ದಿನಾಂಕವನ್ನು ನೀಡುತ್ತಿದ್ದು, ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಮೂಡಿದೆ. ಸರ್ಕಾರವು ತಕ್ಷಣವೇ ಸ್ಪಷ್ಟ ತೀರ್ಮಾನವನ್ನು ಪ್ರಕಟಿಸಬೇಕು ಎಂದು ದಲಿತ ವಿದ್ಯಾರ್ಥಿ ಒಕ್ಕೂಟ ಬೀದರ್ ಒತ್ತಾಯಿಸಿದೆ. ನವೆಂಬರ್ 17 ರಿಂದ ಶಾಲಾ ಕಾಲೇಜುಗಳು ಆರಂಭವಾಗುತ...