ಬಿಸಿಯಾಗಿದ್ದ ಇಸ್ತ್ರಿ ಪೆಟ್ಟಿಗೆಯಿಂದ ಹಾಸಿಗೆಗೆ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದ ಘಟನೆ ಮಂಗಳೂರಿನ ದೇರಳಕಟ್ಟೆಯ ಫ್ಲ್ಯಾಟ್ ವೊಂದರಲ್ಲಿ ನಡೆದಿದೆ. ಫ್ಲ್ಯಾಟ್ ಮ್ಯಾನೇಜರ್ ಶಾಹೀದ್ ಎಂಬುವವರ ಸಮಯ ಪ್ರಜ್ಞೆಯಿಂದಾಗಿ ದೊಡ್ಡ ಅವಘಡ ತಪ್ಪಿದೆ. ದೇರಳಕಟ್ಟೆ ಖಾಸಗಿ ಆಸ್ಪತ್ರೆ ಬಳಿ ಇರುವ ಫ್ಲ್ಯಾಟ್ ನಲ್ಲಿ ಈ ಅವಘಡ ಸಂಭವಿಸಿದೆ. ...