ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದಲ್ಲಿ ಪ್ರಥಮ ದರ್ಜೆ ಸಹಾಯಕ (ಎಫ್ ಡಿಎ) ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ನಡೆದಿದ್ದು, ಈ ಪ್ರಕರಣದಲ್ಲಿ ಶಾಮೀಲಾಗಿರುವ ಅಧಿಕಾರಿಗಳನ್ನ ಬಂಧಿಸಲಾಗಿದ್ದು, ಅವರನ್ನು ಸೇವೆಯಿಂದಲೇ ವಜಾ ಮಾಡಲು ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ. ಇನ್ನೂ ಈ ಸಂಬಂಧ ಸಮಗ್ರ ತನಿಖೆಗೆ ಅವರು ಆದೇಶಿಸಿದ...
ಉಡುಪಿ: ದೇಶದ ಪ್ರತಿಷ್ಠಿತ ಉದ್ಯಮಿ ಅದಾನಿ ಅವರ ಯುಪಿಸಿಎಲ್ ಕಂಪೆನಿ ಉಡುಪಿಯ ಜನರ ಕಿವಿಗೆ ಹೂವಿಟ್ಟಿದೆ. ಈ ಮೂಲಕ ಉದ್ಯೋಗದ ಆಸೆಯಿಂದ ಕಾಯುತ್ತಿದ್ದ ಯುವಕರು ಇದೀಗ ನಿರಾಶರಾಗಿ ಆಕಾಶ ನೋಡುವಂತಾಗಿದೆ. ಈ ಕಂಪೆನಿ ನಿರ್ಮಾಣದ ಸಂದರ್ಭದಲ್ಲಿ ಶೈಕ್ಷಣಿಕ ಅರ್ಹತೆಯ ಯೋಗ್ಯವಾದ ಉದ್ಯೋಗದ ಭರವಸೆ ನೀಡಿದ್ದ ಕಂಪೆನಿ ಭೂಸ್ವಾಧೀನ ಮಾಡಿಕೊಂಡಿತ್ತು. ...
ಉನ್ನಾವೋ: ಭಾರತ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್ ಎಂದು ಬಿಜೆಪಿಯ ವಿವಾದಿತ ಸಂಸದ ಸಾಕ್ಷಿ ಮಹಾರಾಜ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ಮೂಲಕ ಸಾಕ್ಷಿ ಮಹಾರಾಜ್ ಅವರು ಮತ್ತೊಂದು ವಿವಾದಕ್ಕೆ ಕಾರಣರಾಗಿದ್ದಾರೆ. ಉತ್ತರ ಪ್ರದೇಶದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ...
ನವದೆಹಲಿ: ಆರ್ ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಲಾಲು ಪ್ರಸಾದ್ ಯಾದವ್ ಅವರು, ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ರಾಂಚಿ ಆಸ್ಪ್ರತ್ರೆ ವೈದ್ಯರು ಏಮ್ಸ...
ಹೈದರಾಬಾದ್: ಬೀಡಿ ತರಲು ಹೋದ ಮಗ ತಡವಾಗಿ ಮನೆಗೆ ಬಂದ ಎಂದು ತಂದೆಯೇ ಮಗನನ್ನು ಜೀವಂತವಾಗಿ ಸುಟ್ಟು ಕೊಂದ ಭಯಾನಕ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಈ ಘಟನೆ ಜನವರಿ 17ರಂದು ನಡೆದಿದೆ. ತಂದೆ ಬಾಲು ಎಂಬಾತ ಈ ಕೃತ್ಯ ಎಸಗಿದ್ದು, 6ನೇ ತರಗತಿಯ ಬಾಲಕ ಚರಣ್ ಹತ್ಯೆಗೀಡಾದ ಬಾಲಕನಾಗಿದ್ದಾನೆ. ಅಂಗಡಿಗೆ ಹೋಗಿದ್ದ ಬಾಲಕ ತಡವಾಗಿ ಬಂದಿದ್ದಾನೆ...
ಪುಣೆ: ದೇಶದ ಕೊವಿಶೀಲ್ಡ್ ಕೊರೊನಾ ಲಸಿಕೆ ವಿತರಕ ಸಂಸ್ಥೆ ಸೀರಮ್ ಇನ್ಸ್ಟಿಟ್ಯೂಟ್ ನ ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಬೆಂಕಿ ತಗಲಿದ್ದು, ಲಸಿಕೆ ತಯಾರಕ ಘಟಕಗಳ ಪಕ್ಕದಲ್ಲೇ ಇರುವ ನಿರ್ಮಾಣ ಹಂತದ ಕಟ್ಟಡಕ್ಕೆ ಬೆಂಕಿ ಬಿದ್ದಿದೆ ಎಂದು ತಿಳಿದು ಬಂದಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಒಟ್ಟು 10 ಅಗ್ನಿ...
ವಿಜಯವಾಡ: ಈಗಾಗಲೇ ಹಲವು ಜನಪ್ರಿಯ ಯೋಜನೆಗಳ ಮೂಲಕ ದೇಶದ ಗಮನ ಸೆಳೆದಿರುವ ಆಂಧ್ರಪ್ರದೇಶದ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ, ಇದೀಗ ಜನರ ಮನೆ ಬಾಗಿಲಿಗೆ ರೇಷನ್ ಗಳನ್ನು ತಲುಪಿಸುವ ಯೋಜನೆಗೆ ಮುಂದಾಗಿದ್ದಾರೆ. 2,500 ಮೊಬೈಲ್ ವಿತರಣಾ ಘಟಕಗಳ ನೆರವಿನಿಂದ ಈ ಕಾರ್ಯಕ್ರಮವನ್ನು ನಡೆಸಲು ಅವರು ತೀರ್ಮಾನಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿ...
ಬೆಂಗಳೂರು: ನಾಲ್ಕು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ ನಟರಾಜನ್ ಅವರ ಆರೋಗ್ಯದಲ್ಲಿ ನಿನ್ನೆ ಏರುಪೇರಾಗಿತ್ತು. ಇದೀಗ ಅವರ ಆರೋಗ್ಯದ ವಿಚಾರವಾಗಿ ವರದಿಗಳು ಬಂದಿದ್ದು, ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ವೈದ್ಯರು ಶಶಿಕಲಾ ಅವರನ್ನು ಆರ್ ಟಿಪಿಸಿಆರ್ ಕೋವಿಡ್ ಪರ...
ನವದೆಹಲಿ: ಎಲ್ಲ ದೇಶಗಳಲ್ಲಿ ಮುಖ್ಯಸ್ಥರು ಕೊರೊನಾ ಲಸಿಕೆ ಸ್ವೀಕರಿಸಿ ಜನರಿಗೆ ಧೈರ್ಯ ತುಂಬಿದ್ದಾರೆ. ಆದರೆ ಭಾರತದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಯಾವುದೇ ರಾಜ್ಯಗಳ ಮುಖ್ಯಮಂತ್ರಿಗಳು, ಮಂತ್ರಿಗಳು ಕೊರೊನಾ ಲಸಿಕೆ ಸ್ವೀಕರಿಸದೇ ದೂರ ಉಳಿದಿದ್ದಾರೆ ಎಂಬ ಆಕ್ರೋಶದ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರ...
ಬೆಂಗಳೂರು: ಯುವತಿಯ ಸ್ನೇಹಿತರೇ ಆಕೆಯ ನಗ್ನ ಫೋಟೋ ಇರುವುದಾಗಿ ಬೆದರಿಸಿ ಬ್ಲ್ಯಾಕ್ ಮೇಲ್ ಮಾಡಿ ಚಿನ್ನಾಭರಣ, ಹಣ ದೋಚಿದ ಘಟನೆ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸಂತ್ರಸ್ತ ವಿದ್ಯಾರ್ಥಿನಿಯಾಗಿದ್ದಾಳೆ. ಈ ಯುವತಿಗೆ ಇಬ್ಬರು ಯುವಕರು ಪರಿಚಯವಾಗಿದ್ದರು. ಪರಿಚಯದ ಬಳಿಕ ಆಕೆಯ ಮನೆಗೆ ಪದೇ ಪದೇ ಭೇಟ...