ಬೆಳ್ಳಾರೆ: ನನ್ನ ಪತಿಯು ಹಗಲುರಾತ್ರಿ ಸಮಾಜಕ್ಕಾಗಿ ದುಡಿಯುತ್ತಿದ್ದರು. ಎಷ್ಟೊತ್ತಿಗೆ ಯಾರು ಕರೆದರೂ ಹೋಗುತ್ತಿದ್ದರು. ನಾನು ಬೇಡ ಅಂದ್ರೂ, ಅವರ ಅಪ್ಪ ಅಮ್ಮ ಬೇಡ ಅಂದ್ರೂ ಕೇಳುತ್ತಿರಲಿಲ್ಲ.ಇವತ್ತು ಅವರನ್ನು ಕಳೆದುಕೊಂಡಿದ್ದೇನೆ. ನನಗೆ ಅವರನ್ನು ಕೊಡುವವರು ಯಾರು? ಎಂದು ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತ...
ಮಂಗಳೂರು: ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳ ಅವಧಿಯಲ್ಲಿ ಮಸೂದ್ ಮತ್ತು ಪ್ರವೀಣ್ ಹತ್ಯೆಯಾಗಿದ್ದು, ಅತ್ಯಂತ ನೋವಿನ ವಿಚಾರ. ಕೊಲೆಗಡುಕರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ. ಸಮಾಜ ಘಾತುಕ ಶಕ್ತಿಗಳು, ಕೊಲೆಗಡುಕರಿ...
ಬೆಂಗಳೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಬರ್ಬರ ಹತ್ಯೆಯಾಗಿದ್ದರೂ ಬಿಜೆಪಿಯ ಯಾವ ಪ್ರಮುಖ ನಾಯಕರು ಆಗಮಿಸಿಲ್ಲ ಎನ್ನುವ ಆಕ್ರೋಶ ಸಾರ್ವಜನಿಕರು ಹಾಗೂ ಕಾರ್ಯಕರ್ತರಲ್ಲಿ ಮನೆ ಮಾಡಿದ್ದು, ಈ ನಡುವೆ ನಾನಾ ಅನುಮಾನಗಳಿಗೂ ಕಾರಣವಾಗಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆಯಂತೆ ಸಚಿವ ವಿ.ಸುನೀಲ್ ಕುಮಾರ್ ನೆಟ್ಟಾರ್ ಗೆ ದೌಡಾಯಿ...
ಪುತ್ತೂರು: ಮಂಗಳವಾರ ರಾತ್ರಿ ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದರೂ, ಬಿಜೆಪಿಯ ಯಾವುದೇ ಜನಪ್ರತಿನಿಧಿಗಳು ಆಗಮಿಸಿಲ್ಲ ಎಂದು ನೆರೆದಿದ್ದ ಗುಂಪು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಪುತ್ತೂರಿನ ಆಸ್ಪತ್ರೆ ಎದುರು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಹಿಂದುತ್ವಕ್ಕೋಸ್ಕರ ಜೀವವನ್ನೇ ಬಲಿ ಕೊಟ್ಟ, ಅವರ ಮನೆಯವರಿಗೆ ಯಾರಿದ್ದಾರೆ...
ಪುತ್ತೂರು: ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಹಿನ್ನೆಲೆಯಲ್ಲಿ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸಾಕಷ್ಟು ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಪುತ್ತೂರು ತಾಲೂಕಿನ ನಗರ ಪ್ರದೇಶವಾದ ಬೊಳುವಾರಿನಲ್ಲಿ ಸರ್ಕಾರಿ ಬಸ್ ವೊಂದರ ಮೇಲೆ ಕಲ್ಲುತೂರಾಟ ನಡೆದಿದೆ. ಪುತ್ತೂರಿನಿಂದ ಮಂಗಳೂರಿಗ...
ಸುಳ್ಯ: ಬಿಜೆಪಿ ಮುಖಂಡರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಪ್ರವೀಣ್ ನೆಟ್ಟಾರು(32) ಹತ್ಯೆಯಾದ ಯುವಕನಾಗಿದ್ದು, ಬೆಳ್ಳಾರೆಯಲ್ಲಿ ಕೋಳಿ ಫಾರ್ಮ್ ಹೊಂದಿರುವ ಇವರು ಮಂಗಳವಾರ ರಾತ್ರಿ 9 ಗಂಟೆಯ ವೇಳೆಗೆ ಕೋಳಿ ...
ಶಿರಾಡಿ: ವಿದ್ಯುತ್ ಆಘಾತಕ್ಕೊಳಗಾಗಿ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಇಂದು ಸಂಜೆ ನಡೆದಿದ್ದು, ಮೋನಚ್ಚನ್ ಹಾಗೂ ವೀಣಾ ದಂಪತಿಯ ಪುತ್ರ ರೋಫಿನ್ ಮೃತಪಟ್ಟ ಬಾಲಕ ಎನ್ನಲಾಗಿದೆ. ಸದ್ಯದ ಮಾಹಿತಿಗಳ ಪ್ರಕಾರ, ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ನ್ನು ತೆಗೆಯಲು ಮುಂದಾದ ವೇಳೆ ವಿದ್ಯುತ್ ಪ್ರವಹಿಸಿ ಬ...
ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಹಮ್ಮಿಕೊಂಡಿರುವ "ಹರ್ ಘರ್ ತಿರಂಗಾ" ಕಾರ್ಯಕ್ರಮದಡಿ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಿ, ರಾಷ್ಟ್ರಪ್ರೇಮ ಅಭಿವ್ಯಕ್ತಿಗೊಳಿಸಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಗ್ರಾಮೀಣ ಭಾಗದಲ್ಲಿ ತಾಲೂಕು ಪಂಚಾಯತ್ ಕಾ...
ಮಂಗಳೂರು: ಹೊಟೇಲ್ ಗೆ ಹೋಗಿ ಗೂಂಡಾಗಿರಿ ಪ್ರದರ್ಶಿಸಲು ಬಜರಂಗದಳಕ್ಕೆ ಅಧಿಕಾರ ನೀಡಿದವರು ಯಾರು? ಎಂದು ಜೆಡಿಎಸ್ ಯೂಥ್ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 2009ರಲ್ಲಿ ಪಬ್ ದಾಳಿ ಆದಾಗಲೂ ರಾಜ್ಯದಲ್ಲಿ ಬಿಜೆಪಿ ಸರಕಾರವಿತ್ತು. ಈಗಲೂ ಅದೇ ಸರಕಾರ ಇದೆ. ಚುನಾವಣೆ...
ವಿಕ್ರಾಂತ್ ರೋಣ ಬಿಡುಗಡೆಗೆ 2 ದಿನ ಬಾಕಿ ಇರುವಾಗಲೇ ಸಿನಿಮಾದ ಬಹುತೇಕ ಟಿಕೆಟ್ ಗಳು ಬುಕ್ಕಿಂಗ್ ಆಗಿದ್ದು, ಮೊದಲ ಶೋ ನೋಡಲು ಕಾತರರಾಗಿರುವವರು ಬೇಗ ಬೇಗನೇ ಟಿಕೆಟ್ ಖರೀದಿಸದಿದ್ದರೆ, ಟಿಕೆಟ್ ಸಿಗೋದು ಡೌಟು ಎನ್ನಲಾಗ್ತಿದೆ. ಎಲ್ಲೆಡೆ ಸಿನಿಪ್ರಿಯರು ಮೊದಲ ದಿನಕ್ಕೆ ಟಿಕೆಟ್ ಖರೀದಿ ಮಾಡಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಈಗಾಗಲೇ ...