ಚೆನ್ನೈ: ಹರಕೆಯನ್ನು ತೀರಿಸಲು ವ್ಯಕ್ತಿಯೋರ್ವ ದೇವಸ್ಥಾನದ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ವಿಲಕ್ಷಣ ಘಟನೆಯೊಂದು ವರದಿಯಾಗಿದ್ದು, ಶುಕ್ರವಾರ ನಸುಕಿನ ಜಾವ ಈ ಘಟನೆ ನಡೆದಿದೆ. ತಮಿಳುನಾಡಿನ ಕರೂರು ಜಿಲ್ಲೆಯ ದೇವಸ್ಥಾನವೊಂದರ ಎದುರು 60 ವರ್ಷ ವಯಸ್ಸಿನ ಉಳಗನಾಥನ್ ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ...
ಕಲಬುರ್ಗಿ: ಪ್ರಧಾನಿ ಮೋದಿ ಸಂಪುಟದಲ್ಲಿ ನೂತನ ಕೃಷಿ ಮತ್ತು ರೈತ ಕಲ್ಯಾಣ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರು ನಿಸ್ಸಂದೇಹವಾಗಿ ರೈತರ ಸಂಕಟಗಳಿಗೆ ಸ್ಪಂದಿಸಲಿದ್ದಾರೆ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸಲಾಗುತ್ತಿರುವ ಕಣ್ಣಿ ಮಾರ್ಕೆಟ್ ಕಟ್ಟಡ ನಿರ್ಮಾಣಕ್ಕ...
ದಕ್ಷಿಣಕನ್ನಡ: ರಾಜ್ಯದ ವಿವಿಧ ಕಡೆಗಳಿಂದ ಮಕ್ಕಳನ್ನು ಕರೆತಂದು ಬಲವಂತವಾಗಿ ಜೀತಪದ್ಧತಿಗೆ ನೂಕಿದ ದೂರಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜ ಗ್ರಾಮದ ಕರಿಕಳ ಬಳಿಯ ವಿಶ್ವನಾಥ್ ಭಟ್ ಎಂಬಾತನ ಮನೆಗೆ ಜಿಲ್ಲಾಡಳಿತದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಅಪ್ರಾಪ್ತ ವಯಸ್ಸಿನ ಸುಮಾರು 10 ಮಕ್...
ಮಂಡ್ಯ: ಹೆಗಲ ಮೇಲೆ ಕೈ ಇಟ್ಟ ಕಾಂಗ್ರೆಸ್ ಕಾರ್ಯಕರ್ತರೊಬ್ಬರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಲೆಗೆ ಬಾರಿಸಿದ ಪ್ರಸಂಗ ನಡೆಸಿದ್ದು, ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಜಿ ಸಂಸದ ಜಿ.ಮಾದೇಗೌಡ ಅವರ ಆರೋಗ್ಯ ವಿಚಾರಿಸಲು ಶುಕ್ರವಾರ ಸಂಜೆ ಅವರು ಭಾರತೀನಗರಕ್ಕೆ ಬಂದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂ...
ಮೈಸೂರು: ರಾತ್ರಿ ವೇಳೆ ಕಿಟಕಿಯ ಗ್ರಿಲ್ ಮುರಿದು ಒಳನುಗ್ಗಿದ ವ್ಯಕ್ತಿಯೋರ್ವ 30 ವರ್ಷ ವಯಸ್ಸಿನ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಕೆ.ಆರ್.ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ರಾತ್ರಿ ವೇಳೆ ಕಿಟಕಿ ಮೂಲಕ ಆಸ್ಪತ್ರೆಯ ಒಳಗೆ ನುಗ್ಗುತ್ತಿದ್ದ ದುಷ್ಕರ್ಮಿ ಬುದ್ಧಿಮಾಂದ್ಯ ...
ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕಾರಗೃಹದ ಮೇಲೆ ಸಿಸಿಬಿ ಪೊಲೀಸರು ಶನಿವಾರ ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಕೈದಿಗಳ ಬಳಿಯಲ್ಲಿ ಮೊಬೈಲ್ ಗಳು, ಸಿಮ್ ಕಾರ್ಡ್ ಗಳು, ಗಾಂಜಾ, ಚಾಕು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರಾಗೃಹದಲ್ಲಿರುವ ಕೈದಿಗಳು ಮೊಬೈಲ್ ಬಳಸುತ್ತಿದ್ದಾರೆ, ಅಲ್ಲಿಂದಲೇ ಅಪರಾಧ ಕೃತ್ಯಗಳನ್ನು ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಜನರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ದಿನ ಬಿಟ್ಟು ಒಂದು ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗುತ್ತಿದ್ದು, ಬೆಲೆ ಏರಿಕೆಯ ಓಟ ಮುಂದುವರಿದಿದೆ. ಶುಕ್ರವಾರ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇರಲಿಲ್ಲ, ಆದರೆ, ಶನಿವಾರದಿಂದ ಮತ್ತೆ ಬೆಲೆ ...
ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿ ಅವರನ್ನು ಟೀಕಿಸಿದ್ದ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಮನೆಗೆ ಜೆಡಿಎಸ್ ಕಾರ್ಯಕರ್ತರು ಶನಿವಾರ ಬೆಳಿಗ್ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮಂಡ್ಯದ ಕೆ ಆರ್ ಎಸ್ ಅಣೆಕಟ್ಟೆ ಸಮೀಪದ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಮತ್ತು ಮಂಡ್...
ಬೆಂಗಳೂರು: ಕೃಷಿ ಕಾಯ್ದೆ ವಿರೋಧಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತವಾದದ್ದು ಎಂದು ನೂತನ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ನಾನೊಬ್ಬಳು ರೈತನ ಕುಟುಂಬದಿಂದ ಬಂದವಳಾಗಿದ್ದೇನೆ. ಕೇಂದ್ರವು ರೈತರ ಹಿತದೃಷ್ಟಿಯಿಂ...
ಚಿಕ್ಕೋಡಿ: ಪತ್ನಿ ಬಿಟ್ಟು ಹೋದಳು ಎಂದು ಅರ್ಚಕನೋರ್ವ ತಾನು ಪೂಜೆ ಮಾಡುತ್ತಿದ್ದ ದೇವಿಯ ಎದುರೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಿಂದ ವರದಿಯಾಗಿದೆ. ಇಲ್ಲಿನ ಹುಕ್ಕೇರಿ ಪಟ್ಟಣದ ಲಕ್ಷ್ಮೀ ಗಲ್ಲಿಯಲ್ಲಿರುವ ಲಕ್ಷ್ಮೀ ದೇವಸ್ಥಾನದ ಅರ್ಚಕ 36 ವರ್ಷ ವಯಸ್ಸಿನ ಅಶೋಕ ಪೂಜೇರಿ ಎಂಬಾತ ತನ್ನ ಪತ್ನಿಯ ಜೊತೆಗೆ...