ಹುಬ್ಬಳ್ಳಿ: ಕೊರೊನಾ ಎರಡನೇ ಅಲೆಯ ಬೆನ್ನಲ್ಲೇ ಜನರಿಗೆ ಮತ್ತೊಂದು ಶಾಕ್ ನೀಡಿದ್ದ ಬ್ಲ್ಯಾಕ್ ಫಂಗಸ್ ಹುಬ್ಬಳ್ಳಿಯಲ್ಲಿ 10 ಮಂದಿಯ ದೃಷ್ಟಿಯನ್ನು ಸಂಪೂರ್ಣವಾಗಿ ಕಿತ್ತುಕೊಂಡಿದೆ. ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಕಂಡು ಬಂದ ಈ ಬ್ಲ್ಯಾಕ್ ಫಂಗಸ್ ನಿಂದಾಗಿ ಹುಬ್ಬಳ್ಳಿಯ ಕಿಮ್ಸ್ ನಲ್ಲಿ 46 ಜನರಿಗೆ ದೃಷ್ಟಿ ದೋಷ ಕಂಡು ಬಂದಿತ್ತು. ...
ನವದೆಹಲಿ: ಜಮ್ಮುವಿನ ವಾಯುಸೇನಾ ನೆಲೆಯ ಮೇಲೆ ದಾಳಿ ನಡೆದಿದ್ದು, ಸ್ಫೋಟಗಳಿಗೆ ಡ್ರೋಣ್ ಗಳನ್ನು ಬಳಸಿರಬಹುದು ಎಂಬ ಶಂಕೆ ಪ್ರಾಥಮಿಕ ತನಿಖೆಯಿಂದ ವ್ಯಕ್ತವಾಗಿದೆ ಎಂದು ವರದಿಯಾಗಿದೆ. ಭಾರತೀಯ ವಾಯುಸೇನೆಗೆ ಸೇರಿದ ನಾಗರಿಕ ವಿಮಾನ ನಿಲ್ದಾಣದ ರನ್ ವೇ ಮತ್ತು ವಾಯುಸಂಚಾರ ನಿಯಂತ್ರಣ ಕೊಠಡಿಯ ಮೇಲೆ ದಾಳಿ ನಡೆಸಲು ಇದೇ ಮೊದಲ ಭಾರಿಗೆ ಡ್ರೋಣ್ ...
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಗೆ ನಾಳೆ ದಿನಾಂಕ ಪ್ರಕಟವಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದ್ದು, ಈ ಬಗ್ಗೆ ನಾಳೆ ನಡೆಯುವ ಸಭೆಯಲ್ಲಿ ಶಿಕ್ಷಣ ಸಚಿವರು ದಿನಾಂಕ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ...
ಪುತ್ತೂರು: ಅತ್ಯಾಚಾರ ನಡೆಸಿ ಪೊಲೀಸರ ತಲೆ ಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯೋರ್ವ ಇದೀಗ ಅಪಘಾತಕ್ಕೀಡಾಗಿ ತಾನಾಗಿಯೇ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪಮನ್ನೂರು ಗ್ರಾಮದ ಆಲಾಡಿ ನಿವಾಸಿ ಪುರುಷೋತ್ತಮ ಎಂಬಾತ ತನ್ನ ಪತ್ನಿಯ ಅಕ್ಕನ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದು, ಅತ್ಯಾಚಾರದ...
ಲಕ್ನೋ: ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷದ ಜೊತೆಗೆ ಬಿಎಸ್ ಪಿ ಮೈತ್ರಿ ಮಾಡಿಕೊಳ್ಳಲಿದೆ ...
ಈರೋಡ್: ಆರೋಗ್ಯ ಕಾರ್ಯಕರ್ತನೆನ್ನಲಾಗಿದ್ದ ವ್ಯಕ್ತಿ ನೀಡಿದ ಮಾತ್ರೆಗಳನ್ನು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟು, ಅವರ ಪತಿ ಹಾಗೂ ಮತ್ತಿಬ್ಬರು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ನಡೆದಿದೆ. ಈರೋಡ್ ಜಿಲ್ಲೆಯ ಕರುಗೌಂದನ್ ವಲಸು ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ನಿವಾಸಿ ರೈತ ಕರುಪಣ್ಣನ್ ಅವರ ಮನೆಗೆ...
ಅಜ್ಮೀರ್: ಮಗನ ಸಾವಿನ ಸುದ್ದಿ ಕೇಳಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಪುತ್ರ ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿದ್ದರೆ, ತಾಯಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆಯೇ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ...
ಕೋಲ್ಕತ್ತಾ: ನಕಲಿ ಕೊವಿಡ್ ಲಸಿಕೆ ಪಡೆದ ಕಾರಣ ತೃಣಮೂಲ ಕಾಂಗ್ರೆಸ್ ಸಂಸದೆ ಮಿಮಿ ಚಕ್ರವರ್ತಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸುದ್ದಿವಾಹಿನಿಯೊಂದು ವರದಿ ಮಾಡಿದೆ. ಪಶ್ಚಿಮ ಬಂಗಾಳ ಸಂಸದೆಯಾಗಿರುವ ಮಿಮಿ ಚಕ್ರವರ್ತಿ ನಾಲ್ಕು ದಿನಗಳ ಹಿಂದೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪ...
ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಅವರ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿರುವುದರ ವಿರುದ್ಧ ಬಿರುವೆರ್ ಕುಡ್ಲ ಸಂಘಟನೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ರಶೀದ್ ಟಿಪ್ಪು ಎಂಬ ವ್ಯಕ್ತಿಯು ಮಾಡಿರುವ ಪೋಸ್ಟ್ ನಲ್ಲಿ ರಾಜಕೀಯ ಟೀಕೆಗಳು ಹಾಗೂ ವೈಯಕ್ತಿಕ ಅವಹ...
ಜೈಪುರ: ಮದುವೆ ಎಂದರೆ ಸಾಕು, ವರನ ಕಡೆಯವರು ಹೇಳಿದ್ದೇ ನಡೆಯಬೇಕು. ಅವರು ಹೇಳಿದ ಒಂದು ಮಾತಿಗೆ ಒಪ್ಪದಿದ್ದರೆ, ಮದುವೆ ಮುರಿಯುವುದು ಪಕ್ಕಾ. ಹೀಗಾಗಿ ಮದುವೆ ಸಂದರ್ಭದಲ್ಲಿ ವಧುವಿನ ಕಡೆಯವರು ವರನ ಕಡೆಯವರಿಗೆ ತಗ್ಗಿಬಗ್ಗಿ ನಡೆಯುವ ಸಂಪ್ರದಾಯವೋ, ಶೋಷಣೆಯೋ ಇನ್ನೂ ನಡೆಯುತ್ತಲೇ ಇದೆ. ಒಡಿಶಾದಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ಮಟನ್ ಕರಿ...