ನವದೆಹಲಿ: ಕೊವಿಡ್ 19 ಸಾಂಕ್ರಾಮಿಕ ರೋಗದ 2ನೇ ಅಲೆಯ ಸಂದರ್ಭದಲ್ಲಿ ದೇಶಾದ್ಯಂತ ಕೊರೊನಾ ಸೋಂಕಿನಿಂದ ಮೃತಪಟ್ಟವರ ಪಟ್ಟಿಯನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ನೀಡಿದೆ. ಕೊವಿಡ್ 19 ಎರಡನೇ ಅಲೆ ಸಂದರ್ಭದಲ್ಲಿ ದೇಶದಲ್ಲಿ ಒಟ್ಟು 594 ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಈ ಪೈಕಿ ಅತೀ ಹೆಚ್ಚಿನ ಸಂಖ್ಯೆಯಲ...