ಬೆಂಗಳೂರು: ನಾರಾಯಣ ನೇತ್ರಾಲಯದ ಡಾ.ಭುಜಂಗ ಶೆಟ್ಟಿ ಇಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಇಂದು ಆಸ್ಪತ್ರೆಗೆ ಬಂದು ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ಡಾ. ಭುಜಂಗ ಶೆಟ್ಟಿ ಅವರು ಮನೆಗೆ ತೆರಳಿದ ಬಳಿಕ ಸಂಜೆ 6 ಗಂಟೆ ಸುಮಾರಿಗೆ ಹೃದಯಾಘಾತಕ್ಕೆ ಒಳಗಾಗಿದ್ದರು. ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿ ರೋಗಿಗಳ ತ...