ಗೃಹಜ್ಯೋತಿ ಯೋಜನೆಯಲ್ಲಿ ಬಿಪಿಎಲ್, ಎಪಿಎಲ್ ವರ್ಗೀಕರಣ ಮಾಡಿಲ್ಲ. ಸರ್ಕಾರ ಎಲ್ಲವನ್ನು ಸ್ಪಷ್ಟವಾಗಿ ಹೇಳಿದೆ. ಗೊಂದಲ ಉಂಟು ಮಾಡುತ್ತಿರುವುದು ಬಿಜೆಪಿಯವರು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಗೆ ಇಷ್ಟೇ ಹಣ ಖರ್ಚಾಗುತ್ತೆ ಎಂಬುದನ್ನು ಗಮನಿಸಿ ಸ್ಪಷ್ಟ ತೀರ್ಮಾನ ಕೈಗ...