ಮಂಗಳೂರಲ್ಲಿ ಮಾದಕ ದ್ರವ್ಯ ಸೇವನೆ ಆರೋಪದ ಮೇಲೆ ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯರು ಹಾಗೂ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಆದರೆ ಪ್ರಕರಣದ ಸರಿಯಾದ ತನಿಖೆ ನಡೆಸುವಲ್ಲಿ ತನಿಖಾ ಸಂಸ್ಥೆ ವಿಫಲವಾಗಿದೆ. ವೈದ್ಯರು ಮತ್ತು ವಿದ್ಯಾರ್ಥಿಗಳನ್ನು ಸೂಕ್ತ ವಿಚಾರಣೆ ನಡೆಸದೇ ಮಂಗಳೂರು ನಗರ ಪೊಲೀಸ್ ಕಮಿಷನರ್ ಕರ್ತವ್ಯಲೋಪ ಎಸಗಿದ್ದಾರೆ ಎಂದು ನ್...