ಬೆಳ್ತಂಗಡಿ: ರಸ್ತೆ ಹಾಗೂ ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸುವುದಾಗಿ ಪ್ರಕಟಿಸಿದ್ದಾರೆ. ಚಾರ್ಮಾಡಿಯ ಮಸಣ ಗುಡ್ಡೆ, ಗಾಂಧೀನಗರ ಪರಿಸರದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ, ಕುಡಿಯಲು ನೀರೂ ಇಲ್ಲವಾಗಿದೆ. ಈ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳ ಗಮನ ಸೆಳ...