ಮಂಗಳೂರು: ನಗರದ ಬಂದರ್ ನ ಗಾಂಧಿ ಸನ್ಸ್ ಕಟ್ಟಡದ ಕೊಠಡಿಯೊಂದರಲ್ಲಿ ಅಕ್ರಮವಾಗಿ 1,725 ಕೆ.ಜಿ.ಗೂ ಅಧಿಕ ಅಪಾಯಕಾರಿ ಸ್ಫೋಟಕ ದಾಸ್ತಾನು ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. 50 ವರ್ಷ ವಯಸ್ಸಿನ ಆನಂದ ಗಟ್ಟಿ ಬಂಧಿತ ವ್ಯಕ್ತಿಯಾಗಿದ್ದು, ಆರೋಪಿಯಿಂದ 400 ಕೆ.ಜಿ. ಸಲ್ಫರ್ ಪೌಡರ್, 350 ...