ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ಐದು ಮಂದಿ ಪ್ರತಿವರ್ಷ ಶಿವರಾತ್ರಿ ದಿನದಂದು ಬರೋಬ್ಬರಿ 35 ಕಿ.ಮೀ. ದೂರದ ನದಿಗೆ ಬರಿಗಾಲಲ್ಲಿ ತೆರಳಿ ಗಂಗೆ ಹೊತ್ತು ತಂದು ಲಿಂಗಾಭೀಷೇಕ ನಡೆಸುತ್ತಾರೆ. ಅದೇ ಗಂಗೆ ಗ್ರಾಮದ ಪ್ರತಿ ಮನೆಗೂ ತೀರ್ಥ ರೂಪದಲ್ಲಿ ಹಂಚಿಕೆಯಾಗುತ್ತದೆ. ಗ್ರಾಮದ ಸಿದ್ದರಾಮೇಶ್ವರನಿಗೆ ಕಪಿಲಾ ಜಲದಿಂದ ಅಭಿಷೇಕ ಮಾಡುವ ವ...