ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಕೆಎಸ್ ಲೇಔಟ್ ಠಾಣಾ ವ್ಯಾಪ್ತಿಯ ಯಲಚೇನಹಳ್ಳಿ ಬಳಿ ನಡೆದಿದೆ. ಬಿಹಾರ ಮೂಲದ ಗೌತಮ್, ಮಂಡಿಲ್, ಮಹಿಳೆ ಸೋನಿ ಎಂಬವರು ಗಾಯಗೊಂಡವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ...