ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಮೇಳದ ಕಲಾವಿದರೊಬ್ಬರು ನಿಧನರಾದ ಘಟನೆ ನಡೆದಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದ ಗುರುವಪ್ಪ ಬಾಯಾರು (58), ಮೃತಪಟ್ಟವರು. ಕಟೀಲು ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರ...