ಕುಂದಾಪುರ: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಐದು ಬಾರಿ ಗೆಲುವು ಸಾಧಿಸಿ ಕುಂದಾಪುರದ ವಾಜಪೇಯಿ ಎಂದೇ ಖ್ಯಾತರಾಗಿದ್ದ ಬಿಜೆಪಿಯ ಹಾಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಸ್ವಇಚ್ಛೆಯಿಂದ ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ. ಸೋಮವಾರ ಸಂಜ...