ವಿಜಯನಗರ: ಹಂಪಿ ವಿಜಯ ವಿಠಲ ದೇವಸ್ಥಾನದ ಬಳಿ ಭಾನುವಾರ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದೆ. ದೇವಸ್ಥಾನದ ಮಗ್ಗುಲಲ್ಲಿ ಹುಲುಸಾಗಿ ಬೆಳೆದಿದ್ದ ಹುಲ್ಲು ಬಿಸಿಲಿಗೆ ಸಂಪೂರ್ಣ ಒಣಗಿ ಹೋಗಿತ್ತು. ಯಾರೋ ಕಿಡಿಗೇಡಿಗಳು ಸಿಗರೇಟ್ ಸೇದಿ ಎಸೆದಿದ್ದರಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಕಿ ಹೊತ್ತಿದ ತಕ್ಷಣವೇ ಸ್...