ಕರಾವಳಿಯ ಕೆಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಮಾರ್ಚ್ 9, 10 ರಂದು ಬಿಸಿ ಗಾಳಿ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ...