ಹೈದರಾಬಾದ್: ಟ್ರಾಫಿಕ್ ಪೊಲೀಸರು ದಂಡ ಹಾಕಿದ್ದರಿಂದ ಕೋಪಗೊಂಡ ವಿದ್ಯುತ್ ಇಲಾಖೆಯ ನೌಕರನೋರ್ವ ಟ್ರಾಫಿಕ್ ಸಿಗ್ನಲ್ ಹಾಗೂ ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಮಲಕಾಜಾಗಿರಿಯ ವಿದ್ಯುತ್ ಇಲಾಖೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಎ.ರಮೇಶ್ ಬಂಧಿತ ಆರೋಪಿಯಾ...