ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ (ಜಿಡಿಎಸ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸುಮಾರು 2,582 ಗ್ರಾಮೀಣ ಡಾಕ್ ಸೇವಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ. ವಿದ್ಯಾರ್ಹತೆ: ಎಸೆಸೆಲ್ಸಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಟ 18 ರಿಂ...