ವಿಜಯಪುರ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಬಸವರಾಜ್ ಡೂಂಗರಗಾವಿ ಮೃತಪಟ್ಟ ಯೋಧ. ಕೆಲ ದಿನಗಳ ಹಿಂದೆ ಬಸವರಾಜ್ ರಜೆಯ ಮೇಲೆ ಊರಿಗೆ ಬಂದಿದ್ದರು. ಎರಡು ದಿನಗಳ ಹಿಂದೆ ಆಲಮಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರು...
ಧಾರವಾಡ: ರಾಜ್ಯ ಸರ್ಕಾರ ಮಲಗಿ ಬಿಟ್ಟಿದೆ, ಯಾವುದೇ ಕಾರ್ಯಕ್ರಮ ಇಲ್ಲ. ಪರಿಹಾರ ಎನ್ನುವುದು ಕೇವಲ ಮಾಧ್ಯಮದಲ್ಲಿ ಮಾತ್ರ ಇದೆ. ಕೋವಿಡ್ ಸಾವಿನ ಪರಿಹಾರ ಸಿಕ್ಕಿಲ್ಲ, ಮೂರು ವರ್ಷಗಳಿಂದ ಗ್ರಾ.ಪಂ.ಯಲ್ಲಿ ಮನೆ ಕಟ್ಟಿದವರಿಗೆ ಹಣ ಬಂದಿಲ್ಲ ಎಂದು ಮಾಜಿ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ.ಎಂದು ಮಾಜಿ ಸಚಿವ ಸಂತೋಷ್ ಲಾಡ್ ಒತ್ತಾಯಿಸಿದರು. ...
ಬೆಂಗಳೂರು: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ. ಕಳೆದ 15 ದಿನಗಳಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ನಟ ಪ್ರತೀ ದಿನ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮಧ್ಯೆರಾತ್ರಿ 12.30ಕ್ಕೆ ಕೊನೆಯುಸಿರೆಳೆದಿದ್ದಾರೆ. ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ರ...
ಮೈಸೂರು: ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೌಳೇಶ್ವರ ರೆಡ್ಡಿ ಹಾಗೂ ತೇಜಸ್ ಮೃತ ಇಂಜಿನಿಯರಿಂಗ್ ವಿದ್ಯಾರ್ಥಿಗಳು. ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ 2ನೇ ವರ್ಷದ ವಿದ್ಯಾರ್ಥಿಗಳಾದ ಮೌಳೇಶ್ವರ ರೆಡ್ಡಿ, ಸುಹಾ...
ಮೈಸೂರು: ನಾನು ಬಜೆಟ್ ಮೇಲೆ ನಿರೀಕ್ಷೆ ಇಟ್ಟಿರಲಿಲ್ಲ. ಆದರೆ, ರೈತರು, ಮಹಿಳೆಯರು, ಯುವಕರು, ಜನಸಾಮಾನ್ಯರು, ಬಡವರು ಇದರ ಮೇಲೆ ನಿರೀಕ್ಷೆ ಇಟ್ಟಿದ್ದರು. ಅವರ ನಿರೀಕ್ಷೆ ಈಡೇರಿಲ್ಲ. ಆರೋಗ್ಯ, ಶಿಕ್ಷಣ, ಕೃಷಿ ಮೂರು ಕ್ಷೇತ್ರಗಳಲ್ಲಿ ಉತ್ತೇಜನಕಾರಿಯಾದ ಕಾರ್ಯಕ್ರಮಗಳ ನಿರೀಕ್ಷೆಯಲ್ಲಿದ್ದರು. ಆದರೆ ಅವರ ಯಾವ ನಿರೀಕ್ಷೆ ಈಡೇರಿಲ್ಲ ಎಂದು ವಿಪಕ್...
ಮಂಡ್ಯ: ಹಾಲಿಗೆ ರಾಸಾಯನಿಕ ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮದ್ದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಬಿಎಂಸಿ ಕೇಂದ್ರದಲ್ಲಿ ಹಾಲಿಗೆ ರಾಸಾಯನಿಕ ಮಿಶ್ರಣ ಮಾಡಿರುವ ಕುರಿತಂತೆ ಮನ್ಮುಲ್ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿತ್ತು...
ಹುಬ್ಬಳ್ಳಿ: ವ್ಯಕ್ತಿಯೋರ್ವ ಪೊಲೀಸ್ ವಾಹನವನ್ನೇ ಕಳವು ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ ನಡೆದಿದೆ. ನಾಗಪ್ಪ ಹಡಪದ ಪೊಲೀಸ್ ಜೀಪ್ ಕದ್ದ ಆರೋಪಿ. ಪ್ರತಿದಿನ ಪೊಲೀಸ್ ವಾಹನವನ್ನು ಕ್ಲೀನ್ ಮಾಡಲು ಠಾಣೆಗೆ ಬರುತ್ತಿದ್ದ ನಾಗಪ್ಪ, ಠಾಣೆಯಿಂದಲೇ ಜೀಪ್ ಕದ್ದುಕೊಂಡು ಪರಾರಿಯಾಗಿದ್ದು, ಕೂಡಲೇ ಬೆನ್ನಟ್ಟಿದ ಪೊಲೀಸರು ಆ...
ನವದೆಹಲಿ: ಸಂವಿಧಾನವನ್ನು ಪುನಃ ಬರೆಯುವ ಅಗತ್ಯವಿದೆ ಎನ್ನುವ ಮೂಲಕ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಆರ್. ಸಂವಿಧಾನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೊಸ ಸಂವಿಧಾನ ತರುವ ಅವಶ್ಯಕತೆಯಿದೆ. ಇದಕ್ಕಾಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಲಿದ್ದೇನೆ. ದೇಶದಲ್ಲಿ ನಾಯಕತ್ವ ಬದಲಾವಣೆಯ ಅಗತ್ಯವಿದೆ ಎಂದು ಕೆ.ಸಿ....
ಲಕ್ನೋ: ಐಎಎಸ್ ದಂಪತಿ ಜಗಳ ಬೆಡ್ ರೂಂನಿಂದ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆಯೊಂದು ನಡೆದಿದೆ. ಮಹಿಳಾ ಐಎಎಸ್ ಅಧಿಕಾರಿ 32 ವರ್ಷಗಳ ಕಾಲ ತಾನೂ ಅನುಭವಿಸಿರುವ ಕಷ್ಟಗಳ ಬಗ್ಗೆ ದೂರಿನ ಮೂಲಕ ತಿಳಿಸಿದ್ದಾರೆ. ರಾಜ್ಯದ ಪ್ರಮುಖ ಹುದ್ದೆಯಲ್ಲಿರುವ ಹಿರಿಯ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ಮೇ 5, 1990 ರಂದು ವಿವಾಹವಾಗಿದ್ದಾರೆ. ಅದೆಷ್...
ಮಡಿಕೇರಿ: ಕೊಡಗು ಜಿಲ್ಲೆ ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದ ಬೊಮ್ಮಂಜಿಗೇರಿಯಲ್ಲಿ ತಡರಾತ್ರಿ ಮನೆ ಬಾಗಿಲು ಮುರಿದು ಒಳ ನುಗ್ಗಿದ ನಾಲ್ವರು ದುಷ್ಕರ್ಮಿಗಳು ವೃದ್ಧೆಯರನ್ನು ಕಟ್ಟಿ ಹಾಕಿ ಮನೆ ದರೋಡೆ ಮಾಡಿರುವ ಘಟನೆ ನಡೆದಿದೆ. ವೃದ್ಧೆಯರಾದ ಜಾನಕಿ ಮತ್ತು ಅಮ್ನಕ್ಕಿಯನ್ನು ಬೆದರಿಸಿ, ಅವರ ಕೈಕಾಲು ಕಟ್ಟಿ ನಾಲ್ವರು ದುಷ್ಕರ್ಮಿಗಳು ದರೋಡೆ...