ಬೆಂಗಳೂರು: ಕನ್ನಡದ ಹಿರಿಯ ನಟಿ ಜಯಂತಿ ಅವರು ಸೋಮವಾರು ನಸುಕಿನ ಜಾವ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದು, ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟಿ ಜಯಂತಿ ಇಂದು ತಮ್ಮ 76 ವರ್ಷದ ಬದುಕಿಗೆ ವಿದಾಯ ಹೇಳಿದ್ದಾರೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿದ...
ನವದೆಹಲಿ: ಯುವತಿಯೋರ್ವಳು ಆತ್ಮಹತ್ಯೆ ನಡೆಸಲು ಮೆಟ್ರೋ ಸ್ಟೇಷನ್ ಸೆಕ್ಟರ್ 28ರ ಗೋಡೆಯ ಮೇಲೆ ಹತ್ತಿದ್ದು, ಈ ವೇಳೆ ಪೊಲೀಸ್ ಕಾನ್ಸ್ ಟೇಬಲ್ ವೋರ್ವರು ಯುವತಿಗೆ ತಿಳಿಯದ ಹಾಗೆ ಏಕಾಏಕಿ ಗೋಡೆಯ ಬದಿಯಿಂದ ಹೋಗಿ ಆಕೆಯನ್ನು ಹಿಡಿದು ರಕ್ಷಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿಗೆ ಸಮೀಪದ ಫರಿದಾಬಾದ್ ನ...
ಮುಂಬೈ: ಅಶ್ಲೀಲ ವಿಡಿಯೋ ತಯಾರಿಕೆಗೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ ಕುಂದ್ರಾನನ್ನು ಪೊಲೀಸರು ಬಂಧಿಸಿದ್ದಾರೆ. ಹಂಗಾಮಾ 2 ಚಿತ್ರದ ಒಟಿಟಿ ಬಿಡುಗಡೆಯ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದ ಶಿಲ್ಪಾ ಶೆಟ್ಟಿ, ನನ್ನ ಪತಿ “ಅಮಾಯಕ” ಎಂದು ಹೇಳಿಕೊಂಡಿದ್ದರು. ಇದೇ ಸಂದರ್ಭದಲ್ಲಿ ಶಿಲ್ಪಾ ಶೆಟ್ಟಿಯ ತಂಗಿ ಶಮಿತಾ ಶೆಟ್ಟಿ ತ...
ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಸಾಂಗ್ಲಾ ಕಣಿವೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ ಪರಿಣಾಮ ಬೆಟ್ಟದಿಂದ ಬೃಹತ್ ಕಲ್ಲುಗಳು ಉರುಳಿದ್ದು, ಪರಿಣಾಮವಾಗಿ 9 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದು, ಬೆಟ್ಟದಿಂದ ಕಲ್ಲುಗಳು ಉರುಳುವ ಭಯಾನಕ ವಿಡಿಯೋ ವೈರಲ್ ಆಗಿದೆ. ಮೃತಪಟ್ಟವರೆಲ್ಲರೂ ಪ್ರವಾಸಿಗರು ಎಂದು ಹೇಳಲಾಗಿದ್ದು, ಕಣಿವೆಯ ಕೆಳಗೆ...
ಬೆಂಗಳೂರು: ಸಿಎಂ ಬದಲಾವಣೆ ಆಟ ನಾಳೆಗೆ ಮುಂದುವರಿಯುವ ಸಾಧ್ಯತೆಗಳು ಕಂಡು ಬಂದಿದೆ. ಇಂದು ರಾತ್ರಿ ಅಥವಾ ನಾಳೆ ಬೆಳಗ್ಗಿನೊಳಗೆ ಈ ಬಗ್ಗೆ ಸಿಎಂ ಯಡಿಯೂರಪ್ಪನವರಿಗೆ ಸ್ಪಷ್ಟ ಸಂದೇಶ ಹೈಕಮಾಂಡ್ ನಿಂದ ಲಭಿಸಲಿದೆ. ಬೆಳಗಾವಿ ಪ್ರವಾಸದಿಂದ ಬೆಂಗಳೂರಿನ ತಮ್ಮ ಕಾವೇರಿ ನಿವಾಸಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ಇ...
ಬೆಂಗಳೂರು: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರಿಗೆ ಅಧಿಕಾರ ನೀಡಿದಂತೆಯೇ ರಾಜ್ಯದಲ್ಲಿಯೂ ಮಠಾಧೀಶರನ್ನು ಸಿಎಂ ಆಗಿ ನೇಮಕ ಮಾಡಿ ಎಂದು ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದ್ದು, ಯಡಿಯೂರಪ್ಪನವರು ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಿರುವ ಸಂದರ್ಭದಲ್ಲಿಯೇ ಮಠಾಧಿಪತಿಗಳನ್ನು ಸಿಎಂ ಮಾಡಬೇಕು ಎನ್ನುವ ಒತ್ತಾಯ ಸ್ವಾಮೀಜಿಗಳಿಂದ ಕೇಳಿ ಬಂದ...
ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ಚಟುವಟಿಕೆಗಳು ಬಿರುಸುಗೊಂಡಿದ್ದು, ಯಾವುದೇ ಕ್ಷಣಗಳಲ್ಲಿ ಸಿಎಂ ಯಡಿಯೂರಪ್ಪನವರಿಗೆ ಹೈಕಮಾಂಡ್ ಅಂತಿಮ ಸಂದೇಶ ತಲುಪುವ ಸಾಧ್ಯತೆಗಳಿವೆ. ಇನ್ನೂ ಬೆಳಗಾವಿ ಪ್ರವಾಸದಲ್ಲಿರುವ ಯಡಿಯೂರಪ್ಪನವರು ತಮ್ಮ ಸ್ಥಾನದಿಂದ ಇಳಿಯುವ ಕುರಿತ ಪ್ರಶ್ನೆಗೆ ಕಾದು ನೋಡೋಣ ಎಂದಷ್ಟೆ ಉತ್ತರಿಸಿದ್ದಾರೆ. ಸದ್ಯ ಸಿಎಂ ಯಡಿಯೂ...
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಚಟುವಟಿಕೆಗಳು ಆರಂಭವಾಗಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಈ ಸಂಬಂಧ ಪರೋಕ್ಷ ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಸಮರ್ಥಿಸಿಕೊಂಡಿದ್ದಾರೆ. ಯಡಿಯೂರಪ್ಪನವರು ಜನಪ್ರಿಯ ನಾಯಕರಾಗಿದ್ದು, ರಾಜ್ಯದಲ್ಲಿ ಯಾವ ನಾಯಕನಿಗೂ ...
ಲಕ್ನೋ: ಪತಿಯ ಜೊತೆಗೆ ಜಗಳವಾಡಿದ ಪತ್ನಿಯೋರ್ವಳು ತನ್ನ ನಾಲ್ವರು ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಬಾವಿಗೆ ತಳ್ಳಿದ ಆತಂಕಾರಿ ಘಟನೆ ನಡೆದಿದ್ದು, ಪರಿಣಾಮವಾಗಿ ಮೂವರು ಬಾಲಕಿಯರು ಸಾವನ್ನಪ್ಪಿದ್ದಾರೆ. 8 ವರ್ಷ ವಯಸ್ಸಿನ ಗಿಲಬ್ಸಾ, 3 ವರ್ಷ ವಯಸ್ಸಿನ ನುಸಬಾ ಖತೂನ್ ಮತ್ತು 2 ವರ್ಷ ವಯಸ್ಸಿನ ಸಹೆಬಾ ಖತೂನ್ ಮೃತಪಟ್ಟ ಬಾಲಕಿಯರಾಗಿದ್ದು, 5 ...
ಬೆಳಗಾವಿ: ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಕಸ ವಿಲೇವಾರಿ ಸಮರ್ಪಕವಾಗಿ ಆಗುತ್ತಿಲ್ಲ ಎಂದು ಆಕ್ರೋಶಗೊಂಡ ಕ್ಷೇತ್ರದ ಶಾಸಕ ಅಭಯ ಪಾಟೀಲ್, ಮಹಾನಗರ ಪಾಲಿಕೆ ಆಯುಕ್ತ ಮನೆಯ ಮುಂದೆ ಕಸವನ್ನು ಸುರಿದು ಪ್ರತಿಭಟಿಸಿರುವ ಘಟನೆ ನಡೆದಿದೆ. ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿರುವ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್. ಅವರ ನಿವಾಸದ ಮುಂದೆ ಬೆಳಗ್...