ರಾಮನಗರ: ಬಸ್ ಹರಿದು ಬಾಲಕಿಯೋರ್ವಳು ಮೃತಪಟ್ಟ ಘಟನೆ ಮಾಗಡಿ ತಾಲೂಕಿನ ಹೊನ್ನಾಪುರ ಬಳಿಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದ್ದು, ಅಜ್ಜಿಯ ಜೊತೆಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. 6 ವರ್ಷ ವಯಸ್ಸಿನ ಜೀವಿತಾ ಮೃತಪಟ್ಟ ಬಾಲಕಿಯಾಗಿದ್ದು, ಈಕೆ ಕುಮಾರ್ ಹಾಗೂ ಜ್ಯೋತಿ ದಂಪತಿಯ ಏಕೈಕ ಪುತ್ರಿಯಾಗಿದ್ದ...