ಕಲ್ಲಿದ್ದಲು ತುಂಬಿದ್ದ ಟ್ರಕ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟು 20 ಮಂದಿಗೆ ಗಾಯಗಳಾದ ಘಟನೆ ಒಡಿಶಾದ ಜರ್ಸುಗುಡದಲ್ಲಿ (Jharsuguda) ನಡೆದಿದೆ. ಕಂಪೆನಿ ನೌಕರರು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದಾರೆ. ...