ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳಾವಕಾಶ ಇರುವ ಎಲ್ಲಾ ಶಾಲೆ ಗಳಲ್ಲಿ ಸಾವಯವ ಕೃಷಿ ಯ ಮೂಲಕ ಅಕ್ಷರ ಕೈ ತೋಟ ನಿರ್ಮಿಸುವ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗುವುದು ಎಂದು ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ. ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ...