ಅನ್ಯಕೋಮಿನ ಯುವಕನ ಜೊತೆಯಲ್ಲಿ ಯುವತಿಯೋರ್ವಳು ಬೆಂಗಳೂರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಳೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನಲಾದ ತಂಡವೊಂದು ಖಾಸಗಿ ಬಸನ್ನು ತಡೆದು ನಿಲ್ಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬಸ್ ನಲ್ಲಿ ಅನ್ಯಕೋ...