ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ಬಳಿ ನಡೆದಿದೆ. ಈ ಟ್ಯಾಂಕ್ ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿದ್ದು, ನೀರು ದುರ್ವಾಸನೆ ಬರುತ್ತಿರುವುದನ್ನು ಸಾರ್ವಜನಿಕ...