ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ, ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಅಧ್ಯಕ್ಷ ಕೆ.ಚಂದ್ರಶೇಖರ್ ರಾವ್ ಇಂದು ಹೊಸ ರಾಷ್ಟ್ರೀಯ ಪಕ್ಷವನ್ನು ಘೋಷಿಸಲಿದ್ದಾರೆ. ಇಂದು(ಅ.5) ಮಧ್ಯಾಹ್ನ 1:19 ಗಂಟೆಗೆ ಅವರು ತಮ್ಮ ಹೊಸ ರಾಷ್ಟ್ರೀಯ ಪಕ್ಷದ ಹೆಸರನ್ನು ಘೋಷಣೆ ಮಾಡಲಿದ್ದಾರೆ. ಇದಕ್ಕಾಗಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ...