ಬೆಳ್ತಂಗಡಿ: ನಾಲ್ಕು ದಿನದ ಹಿಂದೆ ಕೊಕ್ಕಡ ಗ್ರಾಮದ ಅಗರ್ತ ಎಂಬಲ್ಲಿ ನಡೆದ ಮಹಿಳೆಯೋರ್ವರ ಸಂಶಯಾಸ್ಪದ ಸಾವಿನ ಪ್ರಕರಣ ಕೊಲೆ ಎಂದು ಇದೀಗ ವೈದ್ಯಕೀಯ ವರದಿಗಳಿಂದ ದೃಢಪಟ್ಟಿದ್ದು, ಕೊಲೆ ಆರೋಪದಲ್ಲಿ ಮಹಿಳೆಯ ಪತಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕೊಕ್ಕಡ ಗ್ರಾಮದ ಅಗರ್ತ ನಿವಾಸಿ ಮೋಹಿನಿ(36)ಮೃತಪಟ್ಟವರಾಗಿದ್ದು ಕೊಲೆ ಆರೋಪದಲ...