ಮಂಗಳೂರು: ಬಿಲ್ಲವರ ಮೂಲ ಪುರುಷರಾದ ಕೋಟಿ ಚೆನ್ನಯರನ್ನು ಅವಹೇಳನ ಮಾಡಿ ವಿವಾದಕ್ಕೀಡಾಗಿದ್ದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಸಾರ್ವಜನಿಕರ ತೀವ್ರ ವಿರೋಧದ ನಡುವೆಯೇ ಕ್ಷಮೆ ಯಾಚಿಸಿದ್ದಾರೆ. ಮೂಡುಬಿದಿರೆ ಸಮೀಪದ ಕೆಲ್ಲಪುತ್ತಿಗೆಯ ಪುರಾತನ ಶ್ರೀ ಕ್ಷೇತ್ರ ಭೂತರಾಜಗುಡ್ಡೆಯ ಶ್ರೀ ಧರ್ಮರಸು ದೈವ, ಕುಕ್ಕಿನಂತಾಯ, ಕೊಡಮಣಿತ್ತಾಯ, ಬ್ರಹ್ಮ ಬ...