ನವದೆಹಲಿ: ಪೂರ್ವ ಲಡಾಖ್ ನ ಪ್ಯಾಂಗಾಂಗ್ ತ್ಸೊ ಸರೋವರದ ಪ್ರದೇಶದಲ್ಲಿನ ಸೇನಾ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವ ಸಂಬಂಧ ಚೀನಾದೊಂದಿಗೆ ಮಾಡಿಕೊಂಡಿರುವ ಒಪ್ಪಂದದಲ್ಲಿ ಭಾರತದ ಒಂದಿಂಚು ಬಿಟ್ಟುಕೊಟ್ಟಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಸಂಸತ್ತ...