ನವದೆಹಲಿ: ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊವಿಡ್ 19 ದೃಢಪಟ್ಟಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ವೈರಸ್ ಸೋಂಕಿನ ಲಕ್ಷಣಗಳಿರುವ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. ಇನ್ನೂ ಲತಾ ಮಂಗೇಶ್ಕರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರ ಸೊಸೆ ರಚನಾ, ಲತಾ ಮ...