ಮೂಡಿಗೆರೆ : ಹಿಂದಿನಿಂದಲೂ ಒಕ್ಕಲಿಗರು ತಮ್ಮ ಸ್ವಾರ್ಥ ಜೀವನ ಬಿಟ್ಟು ಮಾನವ ಒಂದೇ ಎಂಬ ಭಾವನೆ ಮೂಡಿಸಿಕೊಂಡು ಸಮಾಜಮುಖಿಯಾದ ಕೆಲಸ ಮಾಡಿಕೊಂಡು ಬಂದಿದ್ದಾರೆ. ಒಕ್ಕಲಿಗರ ಸಮುದಾಯ ಸಮಾಜಕ್ಕೆ ಕೊಟ್ಟ ಕೊಡುಗೆಯನ್ನು ಗುರುತು ಮಾಡುವ ಕಾರ್ಯ ನಾವೆಲ್ಲರೂ ಮಾಡಬೇಕಿದೆ ಎಂದು ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು. ಅವರು ಬುಧವಾರ ಪಟ್ಟಣದ ರೈತಭ...