ಮಂಡ್ಯ: ಸ್ನೇಹಿತರ ಜೊತೆಗೆ ಮಾತನಾಡುತ್ತಿದ್ದ ಯುವಕನಿಗೆ ಡ್ರಾಗರ್ ನಿಂದ ಚುಚ್ಚಿ, ಚಿನ್ನಾಭರಣ ದೋಚಿರುವ ಘಟನೆ ನಡೆದಿದ್ದು, ಘಟನೆಯ ಪರಿಣಾಮ ಗಂಭೀರ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾರೆ. ದಳವಾಯಿಕೋಡಿಹಳ್ಳಿ ಗ್ರಾಮದ 30 ವರ್ಷದ ಯುವಕ ಮಧು ನಿನ್ನೆ ರಸ್ತೆ ಬದಿಯಲ್ಲಿ ನಿಂತುಕೊಂಡು ತನ್ನ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದರು. ಇದೇ ಸಂದರ...