ಮನೆಯೊಂದರಲ್ಲಿ ಚಿನ್ನ ಕಳ್ಳತನ ಮಾಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳ ರಾಜ್ಯದ ತಳಿಪರಂಬದ 42 ವರ್ಷದ ಮಹಮ್ಮದ್ ಕೆ.ಯು. ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿರುವ ಹಂಝ ಮುರ ಉಮ್ಮರ್ ಎಂಬುವವರ ಮನೆಯಲ್ಲಿ ಸಂಬಂಧಿಕರು ಹಾಗೂ ಮ...