ಇಂದು ದೇಶದ ಮೊದಲ ಪ್ರಧಾನಿ ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸಲು ಭದ್ರ ಬುನಾದಿ ಹಾಕಿದ ಶ್ರೇಷ್ಠ ನಾಯಕ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಯಂದು ನಾವು ಅವರಿಗೆ ಗೌರವ ಸಲ್ಲಿಸುತ್ತಿದ್ದೇವೆ. ನೆಹರೂ ಅವರ ಆಚಾರ ವಿಚಾರಗಳ ಬಗ್ಗೆ ದೊಡ್ಡ ಅಧ್ಯಯನ ಮಾಡಬಹುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ರಾಜ್ಯದಲ್ಲಿ ದಶಕಗಳ ನಂತರ ಮೊದಲ ವಿಸ್ತರಣೆಯಲ್ಲಿಯೇ ಪೂರ್ಣ ಪ್ರಮಾಣದ ಸಂಪುಟ ರಚನೆಯಾದದ್ದು ಒಂದು ದಾಖಲೆಯಾಗಿದೆ. ಇಲ್ಲಿನ ರಾಜಭವನದ ಗಾಜಿನ ಮನೆಯಲ್ಲಿ ಇಂದು ಬೆಳಗ್ಗೆ ನಡೆದ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಸ...
ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಹಿಂದಿನ ಸರಕಾರ ಮಾಡಿರುವ ಎಲ್ಲಾ ತಾತ್ಕಾಲಿಕ ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ. ನೂತನ ಸರಕಾರದ ಈ ಆದೇಶವು ಅನುಕಂಪದ ಆಧಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಲ್ಲಿ ನೌಕರಿ ಪಡೆದಿದ್ದ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಯ ಕೆಲಸಕ್ಕೂ ಕುತ್ತ...
ಬೈಕ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಸ್ತಿಕಟ್ಟೆಯಲ್ಲಿ ರಾತ್ರಿ ನಡೆದಿದೆ. ಕಾರು ಯೂ ಟರ್ನ್ ತೆಗೆಯುವ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ...
ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಒಟ್ಟು ಎಂಟು ಸಚಿವ ಸ್ಥಾನ ನೀಡಲಾಗಿದ್ದು ಈ ಸಮುದಾಯದ ಬಹುತೇಕ ಎಲ್ಲಾ ಪ್ರಮುಖ ಒಳ...
ಬಾಗಲಕೋಟೆ: ಫೋನ್ ನಂಬರ್ ಕೇಳಿ ಪೀಡಿಸುತ್ತಿದ್ದ ವ್ಯಕ್ತಿಯೋರ್ವನಿಗೆ ಮಹಿಳೆ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಬಸ್ ನಿಲ್ದಾಣದ ಬಳಿ ನಡೆದಿದೆ. ಮಲ್ಲಿಕಸಾಬ್ ಬೇಪಾರಿ ಎಂಬಾತ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು ಈತ ಕಳೆದ 1 ತಿಂಗಳುಗಳಿಂದ ಫೋನ್ ನಂಬರ್ ಕೊಡುವಂತೆ ಮಹಿಳೆಯನ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ನಡೆದಿರುವ ಧರ್ಮಾಧಾರಿತ ಮತ್ತು ರಾಜಕೀಯ ಪ್ರೇರಿತ ಹತ್ಯಾ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ ರಚಿಸುವಂತೆ ಮಾಜಿ ಸಚಿವ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ. ಅವರು ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ 24 ಮಂದಿ ಹಿಂದುತ್ವವಾದಿಗಳನ್ನು ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹೇಳಿದ್ದಾರೆ. ...
ಬೆಂಗಳೂರು: ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಿಗಳು ಆಗಿರುವ ಹೆಚ್.ಡಿ.ದೇವೇಗೌಡರು ಭಾಗಿಯಾಗುವುದಕ್ಕೆ ಗುರುವಾರ ನಗರದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸರ್ವಾನುಮತದ ಸಹಮತ ವ್ಯಕ್ತಪಡಿಸಲಾಯಿತು. ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದೇಶದ ಹಲವಾರು ರಾಜಕ...
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿ ಇದ್ದಾಗ ಪೊಲೀಸ್ ಇಲಾಖೆ ಸೇರಿದಂತೆ ಸಾಕಷ್ಟು ಕಡೆಗಳಲ್ಲಿ ಧರ್ಮ ನುಸುಳಿತ್ತು. ಪೊಲೀಸರು ಆಯುಧ ಪೂಜೆ ಮಾಡುವಾಗ ಕೇಸರಿ ವಸ್ತ್ರ ಧರಿಸಿ ಕಾಣಿಸಿಕೊಂಡಿದ್ದರು. ಆಗಲೇ ಸಿದ್ದರಾಮಯ್ಯ ಪೊಲೀಸರನ್ನು ಎಚ್ಚೆರಿಸುವ ಕೆಲಸ ಮಾಡಿದ್ದರು. ಒಂದು ಧರ್ಮದ ಪರವಾಗಿ ಕಾಣಿಸಿಕೊಳ್ಳುವುದು ಬೇರೊಂದು ಧರ್ಮದ ಜನರ...