ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಂಗಳೂರು ನಗರದ ಮಾಜಿ ಶಾಸಕ ಬಿ.ಎ.ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂಪಾಯಿ ಮೊತ್ತದ ಚೆಕ್ ಅನ್ನು ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್...
ಯುಎನ್ ಸಿನೆಮಾಸ್ ಬ್ಯಾನರ್ ನಡಿ ನಿರ್ಮಾಣಗೊಂಡಿರುವ ‘ಶಕಲಕ ಬೂಮ್ ಬೂಮ್’ ತುಳು ಚಿತ್ರ ತುಳುನಾಡಿನಾದ್ಯಂತ ಬಿಡುಗಡೆಯಾಯಿತು. ಕಾಮಿಡಿ, ಹಾರರ್ ವಿಭಿನ್ನ ಕಥಾಹಂದರದ ಚಲನಚಿತ್ರವನ್ನು ಶ್ರೀಶ ನಾಯಕ್ ಎಳ್ಳಾರೆ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ನಿತ್ಯಾನಂದ ನಾಯಕ್ ನರಸಿಂಗೆ, ಉಮೇಶ್ ಪ್ರಭು ಮಾಣಿಬೆಟ್ಟು ನಿರ್ಮಾಪಕರಾಗಿದ್ದಾರೆ. ಡಾಲ್ವ...
ಚಾಮರಾಜನಗರ: ಸರಿಯಾಗಿ ಬಸ್ ಗಳು ಸಿಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ರಸ್ತೆಗೆ ಬಂದು ಪ್ರತಿಭಟಿಸುವಂತ ದುಸ್ಥಿತಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಹತ್ತಾರು ಕಾಡಂಚಿನ ಗ್ರಾಮದ ಮಕ್ಕಳದ್ದಾಗಿದೆ. ಗ್ರಾಮಕ್ಕೆ ಪ್ರತಿ ದಿನ ಸರಿಯಾದ ಸಮಯಕ್ಕೆ ಬಸ್ ಬರುತ್ತಿಲ್ಲ, ಒಂದು ವೇಳೆ ಬಸ್ ಬಾರದೇ ಇದ್ದರೆ, ಕಾಡು ದಾರಿಯಲ್ಲ...
ಚಾಮರಾಜನಗರ: ಅನಾರೋಗ್ಯಕ್ಕೀಡಾದ ವ್ಯಕ್ತಿಯನ್ನು ವಾಹನ ಸೌಕರ್ಯ ಇಲ್ಲದಿದ್ದರಿಂದ 10 ಕಿಮೀ. ಡೋಲಿ ಮೂಲಕ ಆಸ್ಪತ್ರೆಗೆ ರವಾನಿಸಿರುವ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ದೊಡ್ಡಾನೆ ಗ್ರಾಮದಲ್ಲಿ ಇಂದು ನಡೆದಿದೆ. ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ದೊಡ್ಡಾಣೆ ಗ್ರಾಮದ ಮಹದೇವ್( 62) ಎಂಬವರು ಇಂದು ಮಧ್ಯಾಹ್ನ ತೀವ...
ಮೂರು ವರ್ಷದ ಹೆಣ್ಣು ಮಗುವನ್ನು ಕೊಂದು ತಾಯಿಯೊಬ್ಬಳು ಮೃತದೇಹವನ್ನು ರೈಲಿನಿಂದ ಎಸೆದ ಘಟನೆ ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ನಡೆದಿದೆ. ತಾಯಿ ಸುನೀತಾ ಮತ್ತು ಆಕೆಯ ಪ್ರಿಯಕರ ಸನ್ನಿ ಅಲಿಯಾಸ್ ಮಾಲ್ತಾ ಸೇರಿ ಈ ದುಷ್ಕೃತ್ಯ ಎಸಗಿದ್ದು, ಸನ್ನಿ ಸಹಾಯದಿಂದ ಮನೆಯಲ್ಲೇ ಮಗುವನ್ನು ಮನೆಯಲ್ಲೇ ಕೊಂದಿದ್ದ ಸುನೀತಾ ಬಳಿಕ ಮೃತದೇಹವನ್ನು ಬ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಉತ್ಸವದಲ್ಲಿ ಪಾಲ್ಗೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಸ್ತೆ ಬದಿಯ ಫುಡ್ ಕೋರ್ಟ್ ನಲ್ಲಿ ತಿಂಡಿ ತಿಂದು ಕಾಫಿನಾಡ ಕಾಫಿ ಸವಿದರು. ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ಫುಡ್ ಕೋರ್ಟ್ ಗೆ ಹೋದ ಪ್ರಹ್ಲಾದ್ ಜೋಶಿ ಹಾಗೂ ಮುರುಗನ್ ಅವರು ತೆರಳಿದ್ದಾರೆ. ಈ ವೇಳೆ ಪುಳಿಯೋಗರೆ, ಮದ್ದೂರು ವಡೆ,...
ಉಡುಪಿ: ಕರಾವಳಿ ಬೈಪಾಸ್ ಸಮೀಪದ ಮಣಿಪಾಲ ಇನ್ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ವೇಳೆ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಅಂಬಲಪಾಡಿಯ ಅಬ್ದುಲ್ ರಶೀದ್(60) ಮೃತಪಟ್ಟವರಾಗಿದ್ದಾರೆ. ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದಾಗ...
ಬೆಂಗಳೂರು: 18 ವರ್ಷದೊಳಗಿನ ಮಕ್ಕಳಿಗೆ ಇನ್ನು ಮುಂದೆ ಕಾಂಡೋಮ್ ಕೊಡಬಾರದು ಎಂದು ರಾಜ್ಯ ಔಷಧಿ ನಿಯಂತ್ರಣ ಮಂಡಳಿ ಆದೇಶ ನೀಡಿದ್ದು, ಮೆಡಿಕಲ್ ಶಾಪ್ ಗಳಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದು ವರದಿಯಾಗಿದೆ. ರಾಜ್ಯ ಔಷಧಿ ನಿಯಂತ್ರಕರಾದ ಬಿ.ಟಿ.ಖಾನಾಪುರೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕಾಂಡೋಮ್ ಅಥವಾ ಗರ್ಭ ನಿರೋಧಕ ಮಾತ್ರೆಗಳನ್ನು ಆನ...
ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಕಣ್ಣನ್ ಕುಟ್ಟಿ (81) ಎಂಬ ವೃದ್ಧರ ಸ್ಥಿತಿ ಚಿಂತಾಜನಕವಾಗಿದೆ. ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾಆಸ್ಪತ್ರೆಯ ನಾಗರಿಕ ಸಹಾಯಕ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಮ...
ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಇಂದು ಉಡುಪಿ ನಗರ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4 ಮತ್ತು 6(ಎ) ಅಡಿಯಲ್ಲಿಒಟ್ಟು 42 ಪ್ರಕರಣ ದಾಖಲಿಸಲಾಯಿತು. ಈ ಸ...