ಬೆಂಗಳೂರು: ಗುಜರಾತ್ ನ ಅಮುಲ್ ಜೊತೆಗೆ ಕರ್ನಾಟಕದ ನಂದಿನಿಯನ್ನು ಒಂದು ಗೂಡಿಸಲು ಕ್ರಮಕೈಗೊಳ್ಳಲಾಗುವುದು ಅನ್ನೋ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ರಾಜ್ಯದಲ್ಲಿ ತೀವ್ರ ಆಕ್ರೋಶವನ್ನುಂಟು ಮಾಡಿದೆ. ಈ ವಿಚಾರ ತೀವ್ರತೆ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ...
ಮಂಡ್ಯ: ರಸ್ತೆ ಬದಿ ನಿಂತಿದ್ದ ಟಿಪ್ಪರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿಡಘಟ್ಟ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಬೈಬಾದ್ ಷಾ(25) ಮೃತಪಟ್ಟ ಯುವಕನಾಗಿದ್ದು, ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಟಿಪ್ಪರ್ ಗೆ ಬೈಕ್ ಡಿಕ್ಕಿ ಹೊ...
ಚಿಕ್ಕಮಗಳೂರು: ಜಿಲ್ಲೆಯ ತರೀಕರೆ ತಾಲೂಕಿನ ನಂದಿಬಟ್ಲು ಗ್ರಾಮದಲ್ಲಿ ಗಜಪಡೆ ದಾಂಧಲೆಯಿಂದ ರೈತರು ಕಂಗೆಟ್ಟಿದ್ದು, ಕಾಡಾನೆಗಳು ಕೃಷಿ ಭೂಮಿಗೆ ದಾಳಿಯಿಟ್ಟು ನಾಶ ಮಾಡುತ್ತಿರುವುದು ರೈತರಿಗೆ ಸಂಕಷ್ಟವಾಗಿ ಪರಿಣಮಿಸಿದೆ. ಕಾಡಾನೆ ದಾಂಧಲೆಯಿಂದ ಸುಮಾರು ನಾಲ್ಕು ಎಕರೆ ಅಡಿಕೆ, ಬಾಳೆ ನಾಶವಾಗಿದ್ದು, ಹಿಂಡು—ಹಿಂಡಾಗಿ ಬರುವ ಆನೆಗಳು ಕೃಷಿ ಭೂಮಿ...
ನವದೆಹಲಿ: ಹೊಸ ವರ್ಷದ ಸಂಭ್ರಮದ ನಡುವೆಯೇ ಗ್ರಾಹಕರಿಗೆ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ದರವನ್ನು 25 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. 19 ಕೆಜಿಯ ವಾಣಿಜ್ಯ ಸಿಲಿಂಡರ್ ಕರ್ನಾಟಕದ ಬೆಂಗಳೂರಿನಲ್ಲಿ 1,685.5 ರೂ., ದೆಹಲಿಯಲ್ಲಿ 1,768 ರೂ., ಮುಂಬೈನಲ್ಲಿ 1,721 ರೂ., ಕೋಲ್ಕತ್ತಾದಲ್ಲಿ 1,870 ರೂ. ಮತ್ತು ಚೆನ್ನೈನಲ್ಲಿ 1,971...
ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಎಂಬಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ಭೋವಿ(50) ಬಂಧಿತ ವ್ಯಕ್ತಿ. ಇವರಿಂದ 105 ಕೆಜಿ ಅಡಿಕೆ, ಕಳವು ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ...
ರಜೆಯಲ್ಲಿ ಊರಿಗೆ ಆಗಮಿಸಿದ್ದ ಬಿಎಸ್ ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ರವಿವಾರ ಮಂಗಳೂರು ನಗರದಲ್ಲಿ ನಡೆದಿದೆ. ಕುಲಶೇಖರ ಸಮೀಪದ ಉಮಿಕಾನ ನಿವಾಸಿ ಹರೀಶ್ ಕುಮಾರ್(43) ಮೃತಪಟ್ಟ ಬಿಎಸ್ ಎಫ್ ಯೋಧ. ಮೃತರು ಪತ್ನಿ, 6 ವರ್ಷದ ಪುತ್ರ, ಒಂದೂವರೆ ವರ್ಷದ ಪುತ್ರಿ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಕಳೆದ 21 ವ...
ಸಮುದಾಯದ ಬಡ ಜನರ ಸೇವೆಗಾಗಿ ತನ್ನ ಬದುಕನ್ನು ಮುಡಿಪಾಗಿಟ್ಟು ಹಲವಾರು ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡ ದಣಿವರಿಯದ ಸಮುದಾಯ ಸೇವಕ , ಸಾಮಾಜಿಕ ಮುಂದಾಳು, ಸದಾ ಹಸನ್ಮುಕಿ ವ್ಯಕ್ತಿತ್ವದ ನೌಶಾದ್ ಹಾಜಿ ಸೂರಲ್ಪಾಡಿ ಯವರ ನಿಧನವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ತುಂಬಲಾರದ ನಷ್ಟ...
ಚಿಕ್ಕಮಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಜನಸಾಗರವೇ ಹರಿದು ಬಂದಿದ್ದು, ಹೊಸ ವರ್ಷ ಆಚರಿಸಿ ಧಾರ್ಮಿಕ ಕ್ಷೇತ್ರಕ್ಕೆ ಪ್ರವಾಸಿಗರು ಭೇಟಿ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಕಾಫಿನಾಡಲ್ಲೇ ಪ್ರವಾಸಿಗರು ಬೀಡು ಬಿಟ್ಟಿದ್ದರು. ನಿನ್ನೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ, ಹೋಂಸ್ಟೇ, ರೆಸ...
ಬೆಳ್ತಂಗಡಿ: ಬೆಳ್ತಂಗಡಿಯ ಗರ್ಡಾಡಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ‘ನಂಡೆ ಪೆಂಙಳ್’ ಎಂಬ ವಿಶೇಷ ಅಭಿಯಾನದ ಮೂಲಕ ನೂರಾರು ಬಡ ಹೆಣ್ಣುಮಕ್ಕಳ ವಿವಾಹಕ್ಕೆ ನೆರವಾಗಿದ್ದ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಕೊನೆಯುಸಿರೆಳೆದಿದ್ದಾರೆ. ಭಾನುವಾರ ಬೆಳಗ್ಗೆ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ಖಾಸಗಿ ಬಸ್ ಹಾಗೂ ...
ಬೆಳ್ತಂಗಡಿ: ಇನ್ನೋವಾ ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ನಡೆದಿದೆ. ಕಾರು ಹಾಗೂ ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಮಾಹಿತಿ ಲ...