ತೋಟದ ಕೆಲಸಕ್ಕೆಂದು ಒಡಿಶಾದಿಂದ ಬಂದಿದ್ದ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದಲ್ಲಿ ನಡೆದಿದೆ. ಒಡಿಶಾ ಮೂಲದ 27ವರ್ಷದ ಡೇಬಿಡ್ ಮಾಜಿ ನಾಪತ್ತೆಯಾದ ವ್ಯಕ್ತಿ. ಇವರು, ಕೆರ್ವಾಶೆ ಗ್ರಾಮದ ಸತೀಶ ಪ್ರಭು ಎಂಬವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು, ಅಲ್ಲೇ ಬಿಡಾರದಲ್ಲಿ ವಾಸವಾಗಿದ್ದರು. ನ...
ಚಿಕ್ಕಮಗಳೂರು: ಬೆಂಗಳೂರಿನಿಂದ ಕಾಫಿನಾಡಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೋರ್ವ ನೀರುಪಾಲಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ. ಶೃಂಗೇರಿಯ ತುಂಗಾ ನದಿಯಲ್ಲಿ ಈಜುವಾಗ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವನ್ನಪ್ಪಿದ್ದು, ಶೃಂಗೇರಿ ಶಾರದಾಂಬೆ ದೇಗುಲದ ಪಕ್ಕದಲ್ಲೇ ಈ ಅವಘಡ ಸಂಭವಿಸಿದೆ. ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಮಹೋತ್ಸವದ ಆರಂಭದ ದಿನವಾದ ಶನಿವಾರ ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ ಜರುಗಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರೀಶ್ ಪೂಂಜಾ ಅವರು ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ...
ಬೆಳಗಾವಿ: ಹಿಂದೂ ಪದ ವಿಚಾರವಾಗಿ ಬೆಳಗಾವಿಯ ಯಮಕನಮರಡಿಯಲ್ಲಿ ಸತೀಶ್ ಜಾರಕಿಹೊಳಿಗೆ ಚಕ್ರವರ್ತಿ ಸೂಲಿಬೆಲೆ ಸವಾಲು ಹಾಕಿದ್ದರು. ಈ ಸವಾಲಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ, ಸೂಲಿಬೆಲೆ ಹೇಳಿರೋದು ಒಂದಾದ್ರೂ ನಡೆದಿದೆಯೇ? ಎಂದು ಪ್ರಶ್ನಿಸಿದ್ದಾರೆ. ನಾವು ಓಪನ್ ಚರ್ಚೆಗೆ ಸಿದ್ಧರಿದ್ದೇವೆ. ಆದರೆ, ಸೂಲಿಬೆಲೆಯ 10...
ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶದ ಮೂಲಕ ಎರಡು ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಲು ಹೂಡಿಕೆದಾರರು ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಸಂದರ್ಭದಲ್ಲಿ ...
ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಗರದ ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಲೋಕಸಭಾ ಸದಸ್ಯರಾದ ಡಿ.ವಿ. ಸದ...
ಮೂಡಿಗೆರೆ: ಪಟ್ಟಣದ ತಾಲೂಕು ಕಚೇರಿಯಲ್ಲಿರುವ ಸರ್ವೆ ಇಲಾಖೆ ಅಧಿಕಾರಿಗಳು ತಮ್ಮ ಕೆಲಸ ಮಾಡಿಕೊಡದೇ ಸತಾಯಿಸುತ್ತಿದ್ದ ಹಿನ್ನಲೆಯಲ್ಲಿ ಅರ್ಜಿದಾರ ಶ್ರೇಷ್ಠಿ ಎಂಬುವರು ಶನಿವಾರ ಸರ್ವೇ ಇಲಾಖೆ ಮುಂದೆ ‘ನಾಳೆ ಬಾ’ ಎಂಬ ನಾಮಪಲಕವನ್ನು ತನ್ನ ಶರ್ಟ್ನ ಹಿಂದೆ ಮುಂದೆ ಹಾಕಿಕೊಂಡು ವಿಭಿನ್ನ ರೀತಿಯಲ್ಲಿ ಏಕಾಂಗಿಯಾಗಿ ಪ್ರತಿಭಟಿಸಿದರು. ಈ ಸಂದರ್ಭ...
ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI)ದ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿಯೋರ್ವನನ್ನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬಂಧಿಸಲಾಗಿದೆ. ರುಹಾಬ್ ಮೆಮನ್(23) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಛತ್ತೀಸ್ಗಢದ ಕಂಕೇರ್ ಜಿಲ್ಲೆಯ ಕಾಡಿನಲ್ಲಿ ತನ್ನ ಕಾರಿನಲ್ಲಿಯೇ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ್ದಾನೆ ...
ಮಂಗಳೂರು: ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಲೋಕಾರ್ಪಣೆ ಮಾಡಿದರು. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮ...
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಅನ್ವಯ ಮೈಸೂರು ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ಪದವಿಯ ವೈದ್ಯಕೀಯ ಸಮಾಜಶಾಸ್ತ್ರ ಪಠ್ಯದಲ್ಲಿ ಸ್ವಮೂತ್ರಪಾನವು ಏಡ್ಸ್ ಹಾಗೂ ಕ್ಯಾನ್ಸರ್ ಗೆ ಮದ್ದು ಎಂದು ಉಲ್ಲೇಖಿಸಲಾಗಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಪಠ್ಯದಲ್ಲಿ ಈ ವಿವಾದಿತ ಅಂಶವಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳ...